ಯಲ್ಲಾಪುರ/ಬೆಂಗಳೂರು : ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿಸಿ , ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆದು, ರಾಜ್ಯದ ಎಲ್ಲಾ ಪಿಯುಸಿ, ಪದವಿ, ಪಿಜಿ ತರಗತಿಗಳಿಗೆ ಫೆ.16 ವರೆಗೆ ರಜೆ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 'ಸಮವಸ್ತ್ರ' ವಿವಾದ ಹಿನ್ನೆಲೆ ಶುಕ್ರವಾರ ಸಂಜೆ ವರ್ಚುವಲ್ ಮೂಲಕ ಸಭೆ ನಡೆಸಿರುವ ಸಿಎಂ ಬೊಮ್ಮಾಯಿ, ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದರು. ವಿವಿಧ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಸೋಮವಾರದಿಂದ 10ನೇ ತರಗತಿಯವರೆಗೆ ಅಂದ್ರೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶಾಲೆ ಶುರುವಾಗಲಿದ್ದು, ನಂತರ ಪೂರ್ವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ತರಗತಿಗಳನ್ನ ಪುನರಾರಂಭಿಸಲಾಗುವುದು' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.