ದೇಶಪಾಂಡೆ ನಗರದ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಯಲ್ಲಾಪುರ : ಕೋಳಿಕೇರಿ ದೇಶಪಾಂಡೆ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪಾಲಕರು ಹಾಗೂ ಗ್ರಾಮಸ್ತರು ಶಿಕ್ಷಕರ ದಿನ ಶಾಲೆಯ ಶಿಕ್ಷಕರಿಗೆ ಸನ್ಮಾನಿಸಿ ಶುಭ ಕೋರಿದರು. ಶಿಕ್ಷಕರಿಂದಾಗಿ ಇಂದು ನಮ್ಮ ಮಕ್ಕಳು ವಿದ್ಯಾವಂತರಾಗಿ ನಾಡಿನ ಬೇರೆ ಬೇರೆ ಕಡೆಗಳಲ್ಲಿ ಉದ್ಯೋಗವನ್ನು ಕಂಡುಕೊಂಡಿದ್ದಾರೆ. ಇಂತಹ ವಿದ್ಯಾರ್ಜನೆ ನೀಡಿದ ಶಿಕ್ಷಕರಿಗೆ ನಾವು ಕೃತಜ್ಞರಾಗಿರಬೇಕಾಗಿರುವುದು ನಮ್ಮ ಜವಾಬ್ದಾರಿ ಎಂದು ಮಾತನಾಡಿದ ಬಹುತೇಕ ಪಾಲಕರು ಅಭಿಪ್ರಾಯಪಟ್ಟರು. ಗ್ರಾಮಸ್ಥರ ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಜ್ಯೊತಿ ನಾಯಕ. ತೀರಾ ಹಿಂದುಳಿದ ಪ್ರದೇಶವಾಗಿರುವ ದೇಶಪಾಂಡೆ ನಗರದ ಜನರಲ್ಲಿ ಜಾಗೃತಿ ಮೂಡಿರುವುದು ಸಂತಸದ ಸಂಗತಿಯಾಗಿದೆ. ಇಂದು ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯವಾಗಿದ್ದು ಈ ನಿಟ್ಟಿನಲ್ಲಿ ಗ್ರಾಮದ ಪಾಲಕ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಮುಂದೆ ಬರುತ್ತಿದ್ದಾರೆ. ನಮ್ಮ ಶಾಲೆಯ ಮಕ್ಕಳು ಕೂಡ ಅಷ್ಟೇ ಉತ್ಸಾಹದಿಂದ ಪಠ್ಯ ಪಠ್ಯೆತರ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶಾಲೆಗೆ ಕೀರ್ತಿ ತರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು. ಪ್ರತಿಭಾ ಕಾರಂಜಿ ಹಾಗೂ ಕ್ರೀಡೆಯಲ್ಲಿ ಭಾಗವಹಿಸಿ ಗ್ರಾಮಕ್ಕೆ ಕೀರ್ತಿ ತಂದ ಇದೆ ಶಾತಿಯ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಬಹುಮಾನವನ್ನು ನೀಡಿ ಅಭಿನಂದಿಸಿದರು. ಸಹ ಶಿಕ್ಷಕರಾದ ಕಲ್ಪನಾ ಆಚಾರಿ, ಪಾರ್ವತಿ ಪಟಗಾರ, ವಾಣಿ ಹೆಗಡೆ, ನಯನ ಬಾಂದೇಕರ್, ಲಕ್ಷ್ಮೀ ಸಿದ್ಧಿ ಮುಂತಾದವರು ಗ್ರಾಮಸ್ಥರು ಸನ್ಮಾನಿಸಿದರು.