ಯಲ್ಲಾಪುರ : ಮಾವಿನಮನೆ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಇತ್ತೀಚೆಗೆ 2024-25ನೇ ಸಾಲಿನ ಪ್ರಥಮ ಹಂತದ ವಾರ್ಡ ಸಭೆ ಹಾಗೂ ಗ್ರಾಮ ಸಭೆ ಗ್ರಾಪಂ ಅಧ್ಯಕ್ಷ ಸುಬ್ಬಣ್ಣ ಕುಂಟೇಗಾಳಿ ಅಧ್ಯಕ್ಷತೆಯಲ್ಲಿ ನಡೆಯಿತು.
ಸಮರ್ಪಕ ವಿದ್ಯುತ್ ಪೂರೈಕೆಯ ಕುರಿತು ಹೆಸ್ಕಾಂ ಸಭೆಯಲ್ಲಿ ಹಲವಾರು ದೂರುಗಳು ಸಾರ್ವಜನಿಕರು ಸಲ್ಲಿಸಿದರು. ಜನರ ಭಾವನೆಗೆ ಸ್ಪಂದಿಸಿದ ಹೆಸ್ಕಾಂ ಅಧಿಕಾರಿಗಳು, ಸದ್ಯ ಮಳೆಗಾಲ ಆಗಿರುವುದರಿಂದ ಸಮಸ್ಯೆಗಳು ಸಹಜವಾಗಿದೆ ಮುಂದೆ ವಿದ್ಯುತ್ತಿಗೆ ಸಂಬಂಧಪಟ್ಟ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಸಾರ್ವಜನಿಕರಿಗೆ ಭರವಸೆ ನೀಡಿದರು.
ಮಲವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ಬೇಗ ನಿಯೋಜಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.
ಜನರ ಪ್ರಶ್ನೆಗೆ ಉತ್ತರಿಸಿದ ಸುಬ್ಬಣ್ಣ ಕುಂಟೇಗಾಳಿ, ಕೈಗಾದ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಅವರು ಪ್ರತಿ ವರ್ಷ ನಮ್ಮ ಭಾಗದ ಶಾಲೆಗಳಿಗೆ ಶಿಕ್ಷಕರನ್ನು ನೀಡುತ್ತಾರೆ. ಈ ಬಾರಿ ಸ್ವಲ್ಪ ವಿಳಂಬವಾಗಿದೆ ಆಗಸ್ಟ್ ತಿಂಗಳಲ್ಲಿ ಪೂರೈಸುವ ಭರವಸೆ ನೀಡಿದ್ದು ಅದರೊಂದಿಗೆ ಶಿಕ್ಷಣ ಇಲಾಖೆ ಕೂಡ ಅತಿಥಿ ಶಿಕ್ಷಕರನ್ನು ನೇಮಿಸಿದೆ ಈ ಭಾಗದ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ ಲೋಕೋಪಯೋಗಿ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಅಥವಾ ಅವರ ಪ್ರತಿನಿಧಿಗಳಾದ ಸಿಬ್ಬಂದಿಗಳು ಸಭೆಗೆ ಗೈರುಹಾಜರಾಗಿದ್ದರು, ಪ್ರಮುಖ ವಿಷಯಗಳ ಚರ್ಚೆಗೆ ಅಧಿಕಾರಿಗಳು ಗೈರು ಹಾಜರಾಗಿದ್ದು ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಯಾರೂ ಉತ್ತರಿಸಬೇಕು ಎಂದು ಕುಂಟೇಗಾಳಿ ಅಸಮಾಧಾನ ವ್ಯಕ್ತಪಡಿಸಿದರು.
ಕೃಷಿ ಇಲಾಖೆಯ ಅಧಿಕಾರಿ ಎಮ್ ಜಿ ಭಟ್ ಕೃಷಿ ಬಗ್ಗೆ ಹಾಗೂ ಕೃಷಿ ಇಲಾಖೆಯಿಂದ ರೈತರಿಗೆ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು ಅದೇ ರೀತಿ ತೋಟಗಾರಿಕಾ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಕೂಡ ಮಾಹಿತಿ ನೀಡಿದರು.
ಇದೆ ಸಂದರ್ಭದಲ್ಲಿ ವಸತಿ ಯೋಜನೆ, ಕೃಷಿ ಇಲಾಖೆ, ಕಂದಾಯ ಇಲಾಖೆಯ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರ ಅನುಮತಿಯ ಮೇರೆಗೆ ಬರಬಹುದಾದ ಇತರೇ ವಿಷಯಗಳಲ್ಲಿ,
ವಾರ್ಡ ಸಭೆಯಲ್ಲಿ ಚರ್ಚೆಗೆ ಬಂದ ವಿಷಯಗಳಾಗಿದ್ದವು.
ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ದಾಕ್ಷಾಯಿಣಿ ನಾಯ್ಕ, ಗ್ರಾಪಂ ಉಪಾಧ್ಯಕ್ಷೆ ಮಂಗಲಾ ಕೆ. ಕುಣಬಿ ಇನ್ನಿತರ ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಪಂಚಾಯತ ಅಭಿವೃದ್ಧಿ ಅಧಿಕಾರಿ ಗಂಗಾಧರ ಎನ್. ಭಟ್ಟ ಸ್ವಾಗತಿಸಿ, ಅಧಿಕಾರಿಗಳನ್ನು ಪರಿಚಯಿಸಿದರು. ಗ್ರಾ.ಪಂ ಸದಸ್ಯ ದೀಪಕ ಭಟ್ ಕೊನೆಯಲ್ಲಿ ವಂದಿಸಿದರು.