ಯಲ್ಲಾಪುರ : ಯಲ್ಲಾಪುರದ ರವಿಕಿರಣ್ ಹೆಗಡೆ ಕೇರಳದ ತಿರುವನಂತಪುರದ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (IISER) ಸಂಶೋಧನಾ ವಿದ್ಯಾರ್ಥಿಯಾಗಿ ಎರಡು ಬಂಗಾರ ಪದಕಗಳೊಂದಿಗೆ ಭೌತಶಾಸ್ತ್ರದಲ್ಲಿ ಬಿಎಸ್ಎಂಎಸ್ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ.
ಇತ್ತೀಚೆಗೆ ತಿರುವನಂತಪುರದಲ್ಲಿ ನಡೆದ ದೀಕ್ಷಾಂತ ಸಮಾರೋಹದಲ್ಲಿ ಕೇಂದ್ರ ಸರ್ಕಾರದ ಮುಖ್ಯ ವೈಜ್ಞಾನಿಕ ಸಲಹೆಗಾರರಾದ ಪ್ರೊ.ಅಜಯ್ ಕುಮಾರ್ ಸೂದ್ ಹಾಗೂ ಐಸರ್ ನಿರ್ದೇಶಕರಾದ ಜೆಎನ್ ಮೂರ್ತಿ ಅವರ ಸಮ್ಮುಖದಲ್ಲಿ ಪದವಿ ಪ್ರಧಾನ ಮಾಡಲಾಯಿತು. ಕಳೆದ ವರ್ಷ ಜರ್ಮನಿಯ ಮ್ಯಾಕ್ಸ್ ಪ್ಲಾಂಕ್ ಸಂಶೋಧನಾ ಸಂಸ್ಥೆಯಲ್ಲಿ ಒಂದು ವರ್ಷದ ಸಂಶೋಧನಾ ವೆಲೋಸಿಪ್ ಪಡೆದು ಭೂಹವಾಮಾನದ ಕುರಿತು ವಿಶೇಷ ಸಂಶೋಧನೆ ಕೈಗೊಂಡಿದ್ದನ್ನು ಸ್ಮರಿಸಬಹುದು.