Adv

news21 ‌ ‌YELLAPURNews prakatane --------- ‌ ‌patanakaroct10to17pydkumar Oct9to15 ‌ ‌ ‌ ‌ ‌ oct5to15-pyd ‌‌ ‌ Vishal-sep13to-unlimited ‌ ‌ ‌ ‌ IMG-20241009-195526

Monday, 8 July 2024

ವಜ್ರಳ್ಳಿಯಲ್ಲಿ ಡೆಂಗ್ಯೂ ಜ್ವರದ ಭೀತಿಯಿಂದ ಸಾಮಾಜಿಕ ಕಾರ್ಯಕರ್ತ ಸ್ವಚ್ಛತೆಗೆ ಮುಂದಾಳತ್ವ

ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮದ ಕೇಂದ್ರ ಸ್ಥಾನದಲ್ಲಿ ರಾಜ್ಯ ಹೆದ್ದಾರಿ ಕೈಗಾ-ಇಳಕಲ್ ರಸ್ತೆಯ ಬದಿಯಲ್ಲಿರುವ ಚರಂಡಿಯಲ್ಲಿ ಕಸ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದ್ದ ಕಾರಣ ಡೆಂಗ್ಯೂ ಜ್ವರದ ಭೀತಿ ಉಂಟಾಗಿತ್ತು. ಈ ಸಮಸ್ಯೆಯನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತ ಟಿ.ಸಿ.ಗಾಂವ್ಕಾರರು ಸ್ವಯಂ ಪ್ರೇರಣೆಯಿಂದ ಕಳೆದ ಎರಡು ದಿನಗಳಿಂದ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.
  ಸಾವಿರಾರು ವಾಹನಗಳು ಓಡಾಡುವ ಮತ್ತು ಶಾಲಾ ಮಕ್ಕಳು ನಿತ್ಯ ನಡೆದು ಹೋಗುವ ಈ ಪ್ರಮುಖ ರಸ್ತೆಯಲ್ಲಿನ ಚರಂಡಿಯಲ್ಲಿ ಕಸ ತುಂಬಿ ನೀರು ಹರಿಯುತ್ತಿದ್ದರೂ, ಲೋಕೋಪಯೋಗಿ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಕಾರಣದಿಂದ ಡೆಂಗ್ಯೂ ಜ್ವರ ಹರಡುವ ಅಪಾಯ ಉಂಟಾಗಿತ್ತು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸಾಮಾಜಿಕ ಕಾರ್ಯಕರ್ತ ಟಿ.ಸಿ.ಗಾಂವ್ಕಾರ ಸ್ವಂತ ಖರ್ಚಿನಲ್ಲಿ ಸ್ಥಳೀಯ ಜನರನ್ನು ನೇಮಿಸಿಕೊಂಡು ಚರಂಡಿಯನ್ನು ಸ್ವಚ್ಛಗೊಳಿಸಿದ್ದಾರೆ.
    ಗಾಂವ್ಕಾರರ ಈ ತ್ವರಿತ ಕ್ರಮಕ್ಕೆ ಸ್ಥಳೀಯ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಲೋಕೋಪಯೋಗಿ ಇಲಾಖೆ ತನ್ನ ಜವಾಬ್ದಾರಿಗಳನ್ನು ನಿರ್ಲಕ್ಷಿಸಿದಾಗ, ಸಾಮಾಜಿಕ ಕಾರ್ಯಕರ್ತರು ಸ್ವಂತ ಮುಂದಾಳತ್ವದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದು ಗಮನಾರ್ಹ ಸಂಗತಿಯಾಗಿದೆ.
   ಈ ಘಟನೆ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯವನ್ನು ಬಯಲಿಗೆ ತಂದಿದೆ. ಜನಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸರ್ಕಾರದ ಕರ್ತವ್ಯವಾಗಿದೆ. ಈ ರೀತಿಯ ನಿರ್ಲಕ್ಷ್ಯಗಳು ಮುಂದಿನ ದಿನಗಳಲ್ಲಿ ಪುನರಾವರ್ತನೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.