ಯಲ್ಲಾಪುರ : ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆದರಿಕೆ ನಿವಾಸಿ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರರಾವ್ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅವರಿಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಧರರಾವ್ ಪತ್ನಿ ಮೂವರು ಪುತ್ರರು ಅಗಲಿದ್ದಾರೆ.1948ರ ಕಾಸರಗೋಡು ಜಿಲ್ಲೆಯ ಕುಂಬ್ಳೆ ಮಹಾಲಿಂಗ ಹಾಗೂ ಕಾವೇರಿ ದಂಪತಿಗಳ ಪುತ್ರನಾಗಿ ಜನಿಸಿದ ಅವರು, ಕೂಡ್ಲು, ಮೂಲ್ಕಿ, ಧರ್ಮಸ್ಥಳ ಮೇಳದಲ್ಲಿ ಅರವತ್ತಕ್ಕೂ ಹೆಚ್ಚು ವರ್ಷ ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ, ಶ್ರೀಕ್ಷೇತ್ರ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸಂದರ್ಭ, ಎಡನೀರು ಮಠದ ಹಾಗೂ ವಿವಿಧ ಸಂಘಟನೆಗಳು ಗೌರವಿಸಿ ಸನ್ಮಾನಿಸಿದ್ದಾರೆ.