ಯಲ್ಲಾಪುರ : ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿ ಆಶ್ರಯದಲ್ಲಿ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಡೆಂಗಿ ರೋಗ ಹಾಗೂ ಲಾರ್ವಾ ಸಮೀಕ್ಷೆ ಕುರಿತು ಬುಧವಾರ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಟಿ. ಭಟ್ಟ, ಡೆಂಗಿ ರೋಗದ ಲಕ್ಷಣಗಳು, ರೋಗನಿರೋಧಕ ಕ್ರಮಗಳು, ಮತ್ತು ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸುವ ವಿಧಾನಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ತರಬೇತಿಯ ವೇಳೆ, ಲಾರ್ವಾ ನಿಯಂತ್ರಣ ಹಾಗೂ ಡೆಂಗಿ ಹರಡುವಿಕೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. .
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮಗಳು ಯುವ ಸಮೂಹವನ್ನು ಆರೋಗ್ಯಕರ ಸಮುದಾಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಲು ಉತ್ತೇಜಿಸುತ್ತದೆ. ಡೆಂಘಿ ನಿಯತ್ರಣ ಲಾರ್ವಾ ನಾಶದ ಕುರಿತು ಮಾಹಿತಿ, ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್. ಡಿ. ಜನಾರ್ಧನ, ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಆರೋಗ್ಯದ ಮಹತ್ವವನ್ನು ಅರಿತು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದರು.
ಉಪನ್ಯಾಸಕಿ ಸವಿತಾರವರು ಸ್ವಸ್ಥ, ಆರೋಗ್ಯ ಪೂರ್ಣ ವಾತಾವರಣ ನಿರ್ಮಾಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.