ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್‌ಗಳು, ಕೋ ಆಪ್‌ರೇಟಿವ್ ಸೊಸೈಟಿಗಳು ಮತ್ತು ಸಹಕಾರಿ ಸಂಸ್ಥೆಗಳ ಅಧ್ಯಕ್ಷರು ಮತ್ತು ಸಿಬ್ಬಂದಿಗಳಿಗೆ ಸೋಮವಾರ ಒಂದು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ, ಪೊಲೀಸ್ ನಿರೀಕ್ಷಕರಾದ ರಮೇಶ ಹಾನಾಪುರ ಅವರು ಈ ಸಂಸ್ಥೆಗಳಲ್ಲಿ ಅನುಸರಿಸಬೇಕಾದ ಅಗತ್ಯ ಎಚ್ಚರಿಕೆ ಕ್ರಮಗಳ ಕುರಿತು ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಭಾಗವಹಿಸಿದವರನ್ನು ಉದ್ದೇಶಿಸಿ ಮಾತನಾಡಿದ ಹಾನಾಪುರ, ಬ್ಯಾಂಕ್ ಮತ್ತು ಎಟಿಎಂ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿ, ಬ್ಯಾಂಕ್ ಮತ್ತು ಎಟಿಎಂ ಕೌಂಟರ್‌ಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಿ. ಕಟ್ಟುನಿಟ್ಟಾದ ಭದ್ರತಾ ಸಿಬ್ಬಂದಿ ಮತ್ತು ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆಯನ್ನು ಸ್ಥಾಪಿಸಬೇಕು. ಎಟಿಎಂ ಯಂತ್ರಗಳಿಗೆ ನಿಯಮಿತವಾಗಿ ನಿರ್ವಹಣೆ ಮಾಡಬೇಕು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಗಮನವಿಟ್ಟಿರಬೇಕು. ಲಾಕರ್ ವ್ಯವಸ್ಥೆ ಬಗ್ಗೆ ಹೆಚ್ಚು ಗಮನವಿರಲಿ, ಗ್ರಾಹಕರಿಗೆ ಭದ್ರವಾದ ಲಾಕರ್ ವ್ಯವಸ್ಥೆಯನ್ನು ಒದಗಿಸಬೇಕು.ಲಾಕರ್‌ಗಳಿಗೆ ನಿಯಮಿತವಾಗಿ ಪರಿಶೀಲನೆ ನಡೆಸಬೇಕು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಗಮನವಿಟ್ಟಿರಬೇಕು ಎಂದು ಹೇಳಿದರು.
ಪೊಲೀಸ್ ಉಪ ನಿರೀಕ್ಷಕ ಸಿದ್ದು ಗುಡಿ ಅವರು ಮಾತನಾಡುತ್ತಾ, "ಆನ್‌ಲೈನ್ ವಂಚನೆಗಳು ಹೆಚ್ಚುತ್ತಿವೆ ಮತ್ತು ಈ ಸಂಸ್ಥೆಗಳು ತಮ್ಮ ಗ್ರಾಹಕರನ್ನು ರಕ್ಷಿಸಲು ಕ್ರಮಗಳನ್ನು ಕೈಗೊಳ್ಳಬೇಕು" ಗ್ರಾಹಕರಿಗೆ ಆನ್‌ಲೈನ್ ವಂಚನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು .ಗ್ರಾಹಕರು ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ಯಾವುದೇ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬಾರದಂತೆ ಅವರಿಗೆ ಸಿಬ್ಬಂದಿಗಳು ಮಾಹಿತಿ ನೀಡಬೇಕು ಎಂದರು.