ಉತ್ತರ ಕನ್ನಡ ಜಿಲ್ಲೆ ಹಾಗೂ ಯಲ್ಲಾಪುರದಲ್ಲಿ ಸೋಮವಾರ ಶಾಲೆ ಪಿಯು ಕಾಲೇಜು ಅಂಗನವಾಡಿಗೆ ರಜೆ
ಯಲ್ಲಾಪುರ/ ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ(ಜುಲೈ 22) ಕೂಡ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದ್ದು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ತಾಲೂಕುಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಅಂಗನವಾಡಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.
ಯಲ್ಲಾಪುರ ತಾಲೂಕಿನಲ್ಲಿ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ ತಿಳಿಸಿದ್ದಾರೆ.