ಯಲ್ಲಾಪುರ: ಶನಿವಾರ, ಕಿರವತ್ತಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಡೆಂಘಿ ಜಾಗೃತಿ ಕಾರ್ಯಕ್ರಮ ಮತ್ತು ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ ಅವರು ಡೆಂಘಿ ರೋಗದ ಲಕ್ಷಣಗಳು, ರೋಗ ಹರಡುವಿಕೆ ಮತ್ತು ನಿಯಂತ್ರಣ ಕ್ರಮಗಳ ಕುರಿತು ವಿವರವಾಗಿ ತಿಳಿಸಿದರು. ಪ್ರತಿ ಶುಕ್ರವಾರ ಈಡೀಸ್ ಲಾರ್ವಾ ಉತ್ಪತ್ತಿ ತಾಣಗಳ ನಾಶ ಚಟುವಟಿಕೆಗಳ ದಿನ ಎಂದು ಘೋಷಿಸಿ, ಈ ಚಟುವಟಿಕೆಯಲ್ಲಿ ಸಮುದಾಯದ ಸಕ್ರಿಯ ಭಾಗವಹಿಸುವಿಕೆಗೆ ಕರೆ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಯು. ಜೋಸೆಫ್ ಅವರು ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಏನು ಮಾಡಬೇಕು ಎಂಬುದರ ಕುರಿತು ಮಾಹಿತಿ ನೀಡಿದರು. ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು, ಸೊಳ್ಳೆ ಪರದೆಗಳ ಬಳಕೆ, ಮತ್ತು ಸರಿಯಾದ ಔಷಧಿಗಳ ಸೇವನೆಯ ಬಗ್ಗೆ ತಿಳಿಸಿದರು.
ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಟಿ. ಭಟ್ ಅವರು ಪ್ರಾಣಿಗಳಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ ನೀಡಿ, ರೋಗಗಳನ್ನು ತಡೆಗಟ್ಟಲು ಏನು ಮಾಡಬೇಕು ಎಂಬುದರ ಕುರಿತು ತಿಳಿಸಿದರು.
ಪಿಡಿಓ ಅಣ್ಣಪ್ಪ ವಡ್ಡರ ಅವರು ಡೆಂಘಿ ಮತ್ತು ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಗ್ರಾಮ ಪಂಚಾಯತ, ಆರೋಗ್ಯ ಇಲಾಖೆ ಮತ್ತು ಸಮುದಾಯದ ಸಕ್ರಿಯ ಪಾತ್ರವಹಿಸುವಿಕೆಗೆ ಕರೆ ನೀಡಿದರು.
ಗ್ರಾಮ ಪಂಚಾಯತ ಚುನಾಯಿತ ಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು, ಈ ಮಾಹಿತಿ ಕಾರ್ಯಕ್ರಮ, ಗ್ರಾಮಸ್ಥರಲ್ಲಿ ಡೆಂಘಿ ಮತ್ತು ಪ್ರಾಣಿಜನ್ಯ ರೋಗಗಳ ಕುರಿತು ಜಾಗೃತಿ ಮೂಡಿಸಲು ಸಹಾಯ ಮಾಡಿತು.
ಯಲ್ಲಾಪುರ ; ಡೆಂಗಿ ಜಾಗೃತಿ ಕಾರ್ಯಕ್ರಮ ಹಾಗೂ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆ ಅಂಗವಾಗಿ ಸರಕಾರಿ ಪದವಿಪೂರ್ವ ಕಾಲೇಜು ಕಿರವತ್ತಿಯಲ್ಲಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡೆಂಗಿ ನಿಯಂತ್ರಣ ಕುರಿತು ಹಾಗೂ ಪ್ರಾಣಿಜನ್ಯ ರೋಗಗಳ ಕುರಿತಾಗಿ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಟಿ. ಭಟ್ಟರವರು ಮಾಹಿತಿ ನೀಡಿದರು. ಸಭೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ, ಯು. ಜೋಸೆಫ್, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರದ್ಧಾ ಭಗತ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಜರಿದ್ದರು.