ಯಲ್ಲಾಪುರ: 78ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಯಲ್ಲಾಪುರದಲ್ಲಿ ಆಗಸ್ಟ್ 15, ಬೆಳಿಗ್ಗೆ 9-00 ಗಂಟೆಗೆ ತಾಲೂಕಾ ಕ್ರೀಡಾಂಗಣ, ಕಾಳಮ್ಮನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಕಾರ್ಯಕ್ರಮವು ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪಟ್ಟಣ ಪಂಚಾಯತ್ ಮತ್ತು ಯಲ್ಲಾಪುರ ತಾಲೂಕಾ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ.
ಬೆಳಿಗ್ಗೆ 9-00 ಗಂಟೆಗೆ ತಹಶೀಲ್ದಾರರು ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಅಶೋಕ ಭಟ್ಟ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಕ್ಕೆ ಗೌರವ ರಕ್ಷೆ ಸಲ್ಲಿಸಲಾಗುವುದು. ನಂತರ ತಹಶೀಲ್ದಾರರು ಸ್ವಾತಂತ್ರ್ಯದ ಮಹತ್ವವನ್ನು ಸಾರುವ ಸಂದೇಶವನ್ನು ನೀಡಲಿದ್ದಾರೆ. ನಂತರ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷೀಯ ನುಡಿಯ ಮೂಲಕ ಈ ಮಹತ್ವದ ದಿನದ ಭಾವನೆಯನ್ನು ಹಂಚಿಕೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ. ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮೀನುಗಾರಿಕೆ ಹಾಗೂ ಬಂದರುಗಳು, ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ, ಸಚಿವರಾದ ಮಂಕಾಳ ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್. ವಿ. ದೇಶಪಾಂಡೆ, ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷರಾದ ಸತೀಶ ಕೃಷ್ಣ ಸೈಲ್ ಅವರುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ಪ್ರಮುಖರಾದ ಪ್ರೊ. ಎಸ್. ವಿ. ಸಂಕನೂರು, ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ, ಪ್ರೊಮೋದ ಹೆಗಡೆ ಸೇರಿದಂತೆ ಹಲವಾರು ಗಣ್ಯರು ಗೌರವ ಉಪಸ್ಥಿತರಿರುವವರು. ಪಟ್ಟಣ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ತಾಲೂಕಾ ಇತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.