ಯಲ್ಲಾಪುರ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಆಗಸ್ಟ್ 15, 2024 ರಂದು ಕಾರವಾರದ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಉದ್ಘಾಟನೆಯಾಗಲಿದೆ.
ಈ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರು ಉದ್ಘಾಟಿಸಲಿದ್ದು, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್. ವಿ. ದೇಶಪಾಂಡೆ, ಶಾಸಕರು ಹಾಗೂ ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟಂಟ್ ಅಂಡ್ ಏಜೆನ್ಸಿಸ್‌ಯ ಅಧ್ಯಕ್ಷ ಸತೀಶ್ ಕೆ. ಸೈಲ್, ಶಾಸಕ ಭೀಮಣ್ಣ ಟಿ. ನಾಯ್ಕ, ಪ್ರಮುಖರಾದ ನಿವೇದಿತ ಅಳ್ವಾ, ವಿ.ಎಸ್. ಪಾಟೀಲ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ ಸೇರಿದಂತೆ ಗಣ್ಯರು ಉಪಸ್ಥಿತರಿರುತ್ತಾರೆ.
ಈ ಪ್ರಾಧಿಕಾರದ ಸ್ಥಾಪನೆಯಿಂದ ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಮುಂತಾದ ಪಂಚ ಗ್ಯಾರಂಟಿಗಳು ಜಿಲ್ಲೆಯ ಜನರಿಗೆ ಸುಲಭವಾಗಿ ದೊರೆಯಲಿವೆ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ಹೀರೋ ಅವರು ಎಲ್ಲರನ್ನು ಹೃತ್ಪೂರ್ವಕವಾಗಿ ಆಹ್ವಾನಿಸಿದ್ದಾರೆ.