ಯಲ್ಲಾಪುರ: ಉಮ್ಮಚಗಿ ಗ್ರಂಥಾಲಯ ಸಭಾಭವನದಲ್ಲಿ ಆಗಸ್ಟ್ 17ರಂದು ಹಿರಿಯ ನಾಗರಿಕರಿಗೆ ಉಚಿತ ಆಯುಷ್ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದಲ್ಲಿ ಉಮ್ಮಚಗಿ ಸರಕಾರಿ ಆಯುರ್ವೇದ ಚಿಕಿತ್ಸಾಲಯ ವೈದ್ಯಾಧಿಕಾರಿ, ಡಾ.ಯೋಗೇಶ ಮಾಡಗಾಂವಕರ ಮಾತನಾಡಿ, ಹಿರಿಯ ನಾಗರಿಕರ ಆರೋಗ್ಯ ಕಾಳಜಿ ಮತ್ತು ಆಯುರ್ವೇದದ ಪ್ರಯೋಜನಗಳ ಬಗ್ಗೆ ತಿಳಿಸಿದರು.
ಹಿತ್ಲಳ್ಳಿ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಚಂದ್ರಶೇಖರ, ಡೆಂಗ್ಯೂ ಮತ್ತು ಚಿಕನ್ ಗುನ್ಯಾ ತಡೆಗಟ್ಟುವಲ್ಲಿ ಆಯುರ್ವೇದದ ಪಾತ್ರದ ಬಗ್ಗೆ ವಿವರಿಸಿದರು.
ಯೋಗಶಿಕ್ಷಕಿ ಪ್ರಿಯಾ ಹೆಗಡೆ, ಹಿರಿಯ ನಾಗರಿಕರಿಗೆ ಸೂಕ್ತವಾದ ಯೋಗಾಭ್ಯಾಸಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ ಅಧ್ಯಕ್ಷ ಕುಪ್ಪಯ್ಯ ಪೂಜಾರಿ, ಹಿರಿಯ ನಾಗರಿಕರಿಗೆ ಆರೋಗ್ಯಕ್ಕೆ ಶಿಬಿರದ ಪ್ರಯೋಜನ ಹಾಗೂ ಮಹತ್ವವನ್ನು ತಿಳಿಸಿದರು.