ಯಲ್ಲಾಪುರ: ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ, ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ವಿದ್ಯಾರ್ಥಿಗಳು ರೂಪಿಸಿರುವ ವಿಶೇಷ ಸಂಚಿಕೆ, ವಿಡಿಯೋ ಮತ್ತು ರೇಡಿಯೋ ಕಾರ್ಯಕ್ರಮಗಳ ಅನಾವರಣ ಕಾರ್ಯಕ್ರಮ ಆಗಸ್ಟ್ 15ರಂದು ನಡೆಯಿತು.
ಸ್ವಾತಂತ್ರ್ಯ ಸಂಗ್ರಾಮದ ಸಮಗ್ರ ಚಿತ್ರಣವನ್ನು ಇವುಗಳಲ್ಲಿ ನೀಡಲಾಗಿದೆ. ವಿಶ್ವದರ್ಶನ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ನಿವೃತ್ತ ಪ್ರಾಂಶುಪಾಲ, ಮೀಡಿಯಾ ಸ್ಕೂಲ್ ಉಪನ್ಯಾಸಕ ಬೀರಣ್ಣ ನಾಯಕ ಮೊಗಟಾ ಮತ್ತು ಮೀಡಿಯಾ ಸ್ಕೂಲ್ ಪ್ರಾಂಶುಪಾಲ ನಾಗರಾಜ ಇಳೆಗುಂಡಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶೋಭಾ ಗೌಡ ಸ್ವಾಗತಿಸಿ ನಿರ್ವಹಿಸಿದರು.
ಮಾತೃಭೂಮಿ ಪ್ರತಿಷ್ಠಾನ: ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಯಲ್ಲಾಪುರ : ಮಾತೃಭೂಮಿ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನೋತ್ಸವದಂದು ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಉಚಿತ ಹಾಲು, ಹಣ್ಣು ಮತ್ತು ಬ್ರೆಡ್ ವಿತರಣಾ ಕಾರ್ಯಕ್ರಮ ನಡೆಯಿತು.