ಯಲ್ಲಾಪುರ/ ಬೆಂಗಳೂರು : ಸೋಮವಾರವ ಬೆಳಿಗ್ಗೆಯಿಂದ ಸಂಜೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಯಲ್ಲಾಪುರ ಪ್ರಾಥಮಿಕ ಶಾಲಾ ಶಿಕ್ಷಕರ ಒಂದು ದಿನದ ಧರಣಿ ನಡೆಸುತ್ತಿದ್ದಾರೆ.
ಶಿಕ್ಷಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಯಲ್ಲಾಪುರದ ಶಿಕ್ಷಕರುಗಳು ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಕುಳಿತಿದ್ದಾರೆ. 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ
ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು. ಸೇವಾ ಜೇಷ್ಠತೆ, ಪದೋನ್ನತಿ ಹಾಗೂ ಇನ್ನಿತರ ನ್ಯಾಯಯುತ ಬೇಡಿಕೆಗಳಿಗಾಗಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ಹಕ್ಕುತಾಯ ಸಭೆಯಲ್ಲಿ ಯಲ್ಲಾಪುರ ತಾಲೂಕಿನ ಈ ಕೆಳಗಿನ ಶಿಕ್ಷಕರು ಧರಣಿ ಕುಳಿತಿದ್ದಾರೆ.