ಯಲ್ಲಾಪುರ : ಪಟ್ಟಣದ ಅಡಿಕೆ ಭವನದಲ್ಲಿ ಸೆ.15 ರವಿವಾರ ಬೆಳಿಗ್ಗೆ 11 ಗಂಟೆಗೆ ಶ್ರೀಕೃಷ್ಣಾರ್ಪಣಂ ಸಮಾರಂಭ ನಡೆಯಲಿದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೂಜ್ಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು ಶ್ರೀಮಠದಲ್ಲಿ ಬಿಡುಗಡೆಗೊಳಿಸಿ, ಆಶೀರ್ವದಿಸಿ, ಸಮಾರಂಭಕ್ಕೆ ಶುಭ ಹಾರೈಸಿದರು. ಕಿರಿಯ ಶ್ರೀಗಳಾದ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿಯವರು ಉಪಸ್ಥಿತರಿದ್ದು, ಆಶೀರ್ವದಿಸಿದ್ದಾರೆ.
ಸುಜ್ಞಾನ ಸೇವಾ ಫೌಂಡೇಶನ್ ಉತ್ತರಕನ್ನಡ, ಇ-ಯಲ್ಲಾಪುರ ಡಿಜಿಟಲ್ ನ್ಯೂಸ್, ಸುಜ್ಞಾನವಾಹಿನಿ ಪತ್ರಿಕೆ ವತಿಯಿಂದ ಹಾಂಗ್ಯೋ ಐಸ್ ಕ್ರೀಂ, ಯಲ್ಲಾಪುರದ ಟಿ.ಎಸ್.ಎಸ್.ಶಿರಸಿ ಮತ್ತು ಗೌತಮ್ ಜುವೆಲ್ಲರ್ಸ್ , ರಂಗಸಹ್ಯಾದ್ರಿ ಸಹಯೋಗದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ನಡೆದ ಉತ್ತರಕನ್ನಡ ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕಶ್ರೇಷ್ಠರಿಗೆ ಪ್ರತಿಷ್ಠಿತ ಸುಜ್ಞಾನ ಸಮ್ಮಾನ್, ಸುಜ್ಞಾನ ಶ್ರೀ, ಸುಜ್ಞಾನ ಸೇವಾ ಪ್ರಶಸ್ತಿ ಪ್ರದಾನ ಮತ್ತು ಶ್ರೀಕೃಷ್ಣ ನೃತ್ಯಾಮೃತ ವೈಭವ, ಶ್ರೀಕೃಷ್ಣ ಗಾನಾಮೃತ ವೈಭವ ಕಾರ್ಯಕ್ರಮಗಳು ಶ್ರೀಕೃಷ್ಣಾರ್ಪಣಂ ಸಮಾರಂಭದಲ್ಲಿ ನಡೆಯಲಿವೆ.
ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಸುಜ್ಞಾನ ಸೇವಾ ಫೌಂಡೇಶನ್ ಅಧ್ಯಕ್ಷ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುಜ್ಞಾನ ಸೇವಾ ಫೌಂಡೇಶನ್ (ರಿ) ಉತ್ತರಕನ್ನಡ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ, ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ ಯಲ್ಲಾಪುರ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಇದ್ದರು.
.
.
.