ಯಲ್ಲಾಪುರ : ಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣಾ ಸಮಾರಂಭವು ಸೆ. 5ರಂದು ವೇದವ್ಯಾಸ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಯಲ್ಲಾಪುರ (ಶಿರಸಿ ಶೈಕ್ಷಣಿಕ ಜಿಲ್ಲೆ) ಮತ್ತು ಅಂಕೋಲಾ ಅರ್ಬನ್ ಕೋ-ಆಪ್ ಬ್ಯಾಂಕ್ ಲಿ., ಶಾಖೆ ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮ ಬೆಳಿಗ್ಗೆ 9.30 ಘಂಟೆಗೆ ಆರಂಭವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಎಮ್ಎಲ್‌ಸಿ ಶಾಂತಾರಾಮ ಸಿದ್ದಿ, ಆರ್.ಎಂ.ಒ. ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪ.ಪಂ ಅಧ್ಯಕ್ಷೆ ನರ್ಮದಾ ರವಿ ನಾಯ್ಕ, ಉಪಾಧ್ಯಕ್ಷ ಅಮಿತ್ ಅಂಗಡಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಅಂಕೋಲಾ ಅರ್ಬನ್ ಕೋ-ಆಪ್ ಬ್ಯಾಂಕ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ ಹಾಗೂ ಶಿಕ್ಷಕರ ವಿವಿಧ ಸಂಘದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಹಶೀಲ್ದಾರ ಅಶೋಕ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ ಹಾಗೂ ತಾಲೂಕಾ ಶಿಕ್ಷಕರ ಸಂಘದ ಪ್ರಕಟಣೆ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನವೂ ನಡೆಯಲಿದೆ.