ಯಲ್ಲಾಪುರ/ಶಿರಸಿ: 33 ವರ್ಷಗಳಿಂದ ಅರಣ್ಯವಾಸಿಗಳ ಪರ ಹೋರಾಟ ಮಾಡುತ್ತಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ, ಮುಂದಿನ ದಿನಗಳಲ್ಲಿ ರಾಜ್ಯಾದಂತ ಸಂಘಟಿತ ಮತ್ತು ಕಾನೂನಾತ್ಮಕ ಹೋರಾಟ ಮುಂದುವರಿಸಲು ನಿರ್ಧರಿಸಿದೆ. ಈ ಸಂಬಂಧ ನವೆಂಬರ್ 7ರಂದು ಬೆಂಗಳೂರಿನಲ್ಲಿ "ಅರಣ್ಯವಾಸಿಗಳ ಉಳಿಸಿ ಜಾಥಾ" ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದರು.
ಈ ನಿರ್ಧಾರವನ್ನು, ಶಿರಸಿಯ ಮಾರಿಕಾಂಬಾ ದೇವಸ್ಥಾನದ ಸಂಭಾಗಣದಲ್ಲಿ ಸೆಪ್ಟೆಂಬರ್ 12 ರಂದು ನಡೆದ "ಅರಣ್ಯವಾಸಿಗಳ ಚಿಂತನೆ" ಸಭೆಯಲ್ಲಿ ಕೈಗೊಳ್ಳಲಾಯಿತು. ಸಭೆಯಲ್ಲಿ, ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಅರ್ಜಿ ವಿಚಾರಣೆಯನ್ನು ಕಾನೂನಾತ್ಮಕ ರೀತಿಯಲ್ಲಿ ನಡೆಸದಿರುವುದನ್ನು ಹಾಗೂ ಅರಣ್ಯವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಲಾಯಿತು.
ಮತ್ತು, ಅರಣ್ಯ ಕಾಯಿದೆ ಕಲಂ 64 ಎ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳಿಗೆ, ಪ್ರಶ್ನಾತ್ಮಕ ನೋಟಿಸ್ ನೀಡದಿರುವುದನ್ನು ವಿರೋಧಿಸಿ ಸಭೆಯಲ್ಲಿ 6 ನಿರ್ಣಯಗಳನ್ನು ಅಂಗೀಕರಿಸಲಾಯಿತು.
ಅರಣ್ಯ ಸಚಿವರಿಗೆ ಆಹ್ವಾನ:
ಜಿಲ್ಲೆಯಲ್ಲಿ ಅರಣ್ಯವಾಸಿಗಳ ಜೀವನದ ಕುರಿತು ಅಧ್ಯಯನ ಮಾಡಲು ಹಾಗೂ ಅವರ ಸಮಸ್ಯೆಗಳ ಆಲಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಉತ್ತರ ಕನ್ನಡ ಜಿಲ್ಲೆಗೆ ಆಹ್ವಾನ ನೀಡಲು ಸಭೆ ತೀರ್ಮಾನಿಸಿದೆ.
.
.
.