ಯಲ್ಲಾಪುರ: ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಮತ್ತು ಯೋಗ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಏಳನೇ ತರಗತಿಯ ವಿದ್ಯಾರ್ಥಿನಿ ಅಶಿತಾ ಹೆಗಡೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸರ್ಕಾರದ ವತಿಯಿಂದ ಶಿರಸಿಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಶಿತಾ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ನೇರಳೆ ಬೆಲ್ಟ್ ಹೊಂದಿರುವ ಅಶಿತಾ ಅವರ ಈ ಸಾಧನೆಯು ಮನಸ್ವಿನೀ ವಿದ್ಯಾನಿಲಯಕ್ಕೆ ಹೆಮ್ಮೆಯನ್ನು ತಂದಿದೆ.
ಅದೇ ರೀತಿ, ಪರ್ಣಿಕಾ ಹೆಗಡೆ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಗುಂಪು ಯೋಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆ ಆಗಸ್ಟ್ 27 ರಂದು ಯಲ್ಲಾಪುರದ ಹೋಲಿ ರೋಜರಿ ಶಾಲೆಯಲ್ಲಿ ನಡೆದಿತ್ತು.
ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಇತರ ವಿದ್ಯಾರ್ಥಿಗಳು ಸಹ ಉತ್ತಮ ಸಾಧನೆ ಮಾಡಿದ್ದಾರೆ. ವತ್ಸಲ ಜೈನ್ ರಿದಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನ ಪಡೆದರೆ, ಆಶಿತಾ ಹೆಗಡೆ ಆರ್ಟಿಸ್ಟ್ ಯೋಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅದೇ ರೀತಿ, ತನ್ಮಯ್ ಬಿಲ್ಲವ ಆರ್ಟಿಸ್ಟ್ ಯೋಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷೆ ರೇಖಾ ಭಟ್ ಕೋಟೆಮನೆ, ಆಡಳಿತ ಮಂಡಳಿ, ಶಿಕ್ಷಕರ ವರ್ಗ ಮತ್ತು ಪಾಲಕ-ಪೋಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.