ಯಲ್ಲಾಪುರ : ಉತ್ತಮ ಆಡಳಿತ ಮಂಡಳಿ ಹಾಗೂ ಉನ್ನತ ಮಟ್ಟದ ಶಿಕ್ಷಣ ಪಡೆದ ಅನುಭವಿ ಪ್ರಾಧ್ಯಾಪಕ ವರ್ಗ, ಲ್ಯಾಬ್ ಹಾಗೂ ಇತರೆ ಮಾನದಂಡಗಳನ್ನು ಆಧರಿಸಿ ವಿಶ್ವದರ್ಶನ ಕಾಲೇಜ್ ಆಫ್ ಬಿಸಿಎಗೆ ಆಲ್ ಇಂಡಿಯಾ ಕೌನ್ಸಿಲ್ ಪಾರ್ ಟೆಕ್ನಿಕಲ್ ಎಜುಕೇಶನ್ ಇವರು ಮಾನ್ಯತೆ ನೀಡಿರುತ್ತಾರೆ.
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಕಳೆದ ಮೂರು ದಶಕಗಳಿಂದ ರಾಜ್ಯದ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಸಂಸ್ಥೆಯಲ್ಲಿ 2024ನೇ ಸಾಲಿನಿಂದ ಪ್ರಾರಂಭಿಸಲಾದ ಬಿಸಿಎ ಕಾಲೇಜು ಕಳೆದ ಒಂದು ವರ್ಷದಲ್ಲಿ ಉನ್ನತ ಮಟ್ಟದ ಫಲಿತಾಂಶದೊಂದಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಎಐಸಿಟಿಇ ಮಾನ್ಯತೆಯಿಂದ ದೇಶ ವಿದೇಶ ಮಟ್ಟದ ತಂತ್ರಜ್ಞಾನ ಅರಿವು ಹಾಗೂ ತಂತ್ರಜ್ಞಾನದ ತರಬೇತಿ, ವಿದ್ಯಾರ್ಥಿವೇತನ ಹಾಗೂ ಉನ್ನತ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ವಿದ್ಯಾರ್ಥಿಗಳಿಗೆ ದೊರೆಯಲಿದೆ. ಸಂಸ್ಥೆಗೆ ಇದೊಂದು ಹೆಮ್ಮೆಯ ವಿಷಯ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಕಾಶ್ ಕೋಣೆಮನೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.
.
.