ಯಲ್ಲಾಪುರ: ತಾಲೂಕಿನ ಕ್ರೀಡಾಂಗಣ, ಕಾಳಮ್ಮನಗರದಲ್ಲಿ ಸೆಪ್ಟೆಂಬರ್ 17 ರಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ 14 ಮತ್ತು 17 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಒಲಿಂಪಿಕ್ ಧ್ವಜಾರೋಹಣ ಮಾಡುವ ಮೂಲಕ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಹೇಳಿ, "ಕ್ರೀಡೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪ್ರಮುಖವಾದ ಸಂಗತಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕ್ರೀಡೆಯನ್ನು ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸಬೇಕು," ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತಿ ಅಧ್ಯಕ್ಷೆ ನರ್ಮದಾ ರವಿ ನಾಯ್ಕ ವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕರಾದ ಪ್ರಕಾಶ ತಾರೀಕೊಪ್ಪ, ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶುಭಾಶಯಗಳನ್ನು ತಿಳಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಕ್ಕಾ ಅಧ್ಯಕ್ಷ ನಾರಾಯಣ ನಾಯಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಜಯ್ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾರಾಯಣ ಆರ್. ನಾಯಕ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಆರ್.ಆರ್. ಭಟ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾನಂದ ನಾಯಕ್ ಮತ್ತು ಸಮನ್ವಯಾಧಿಕಾರಿಯಾದ ಸಂತೋಷ ಜಿಗಳೂರ್ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್.ಆರ್. ಹೆಗಡೆ ಸ್ವಾಗತಿಸಿದರು. ಶಿಕ್ಷಕ ಶ್ರೀಧರ್ ಹೆಗಡೆ ನಿರ್ವಹಿಸಿದರು.
.
.