

ಗಣೇಶೋತ್ಸವದ ಅವಧಿಯಲ್ಲಿ ಶಾಸಕರು ಕ್ಷೇತ್ರದ ವಿವಿಧ ಭಾಗಗಳಲ್ಲಿರುವ ಗಣೇಶ ಮೂರ್ತಿಗಳನ್ನು ಪೂಜೆ ಸಲ್ಲಿಸಿದ ನಂತರ, ಅಲ್ಲಿಯ ಜನರೊಂದಿಗೆ ಸಂವಾದ ನಡೆಸಿದರು. ಅವರ ಸಮಸ್ಯೆಗಳನ್ನು ಆಲಿಸಿದರು
ಶಿವರಾಮ ಹೆಬ್ಬಾರ್ ಅವರು ರವಿವಾರ ಪಟ್ಟಣದ ನೂತನ ನಗರದಲ್ಲಿ ಸ್ಥಳೀಯ ಗಜಾನನೋತ್ಸವ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಿರುವ ಶ್ರೀ ಗಣಪತಿ ಮೂರ್ತಿಯ ದರ್ಶನವನ್ನು ಪಡೆದರು.

ನಂತರದ ಗಜಾನನೋತ್ಸವ ಸಮಿತಿಯ ವತಿಯಿಂದ ಆಯೋಜಿಸಿದ್ದ ಅನ್ನ ಪ್ರಸಾದ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತಾವು ಸಹ ಕೆಲ ಕಾಲ ಭಕ್ತಾದಿಗಳಿಗೆ ಅನ್ನ ಪ್ರಸಾದವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ವಿಜಯ ಮಿರಾಶಿ, ವಿಕಾಸ ಬ್ಯಾಂಕ್ ಅಧ್ಯಕ್ಷರಾದ ಮುರಳಿ ಹೆಗಡೆ ಸೇರಿದಂತೆ ಸ್ಥಳೀಯ ಪ್ರಮುಖರು, ಗಜಾನನೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
.
.
.