ಯಲ್ಲಾಪುರ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಬಿಎ ಮತ್ತು ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಾಗೂ ಅವರ ಪಾಲಕರಿಗೆ ಅಭಿವಿನ್ಯಾಸ
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ, ಅವರು, ವಿದ್ಯಾರ್ಥಿಗಳು ತಮ್ಮ ಪ್ರವೃತ್ತಿಗಳ ಬಗ್ಗೆ ಚಿಂತನೆ ಮಾಡಬೇಕು ಮತ್ತು ತಮ್ಮನ್ನು ತಾವು ಅವಲೋಕಿಸಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿಗಳಿಗೆ ತಮ್ಮ ಜೀವನದಲ್ಲಿ ಸಾಧನೆ ಮಾಡಲು ಪ್ರೇರೇಪಿಸಿದರು.
ಮುಂಡಗೋಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರಸನ್ನ ಸಿಂಗ್ ಬಿ ಹಾಜೆರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತುಗಳ ಬಗ್ಗೆ ವಿವರಿಸಿದರು. ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಆರ್ ಡಿ ಜನಾರ್ಧನ್, ವಿದ್ಯಾರ್ಥಿಗಳು ಓದಿನಲ್ಲಿ ಕುತೂಹಲತೆ ಸಹಪಾಠಿಗಳ ಜೊತೆ ಉತ್ತಮ ಭಾವನಾತ್ಮಕ ಸಂಬಂಧ ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಒತ್ತು ನೀಡಿದರು.
ಇದೇ ಸಂದರ್ಭದಲ್ಲಿ ಬೀರಣ್ಣ ನಾಯಕ ಮೊಗಟಾ ಹಾಗೂ ಪ್ರಸನ್ನ ಸಿಂಗ್ ಬಿ ಹಾಜೆರಿ ಅವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವೇದಾ ಭಟ್ಟ ಪ್ರಾರ್ಥಿಸಿದರು, ಐಕ್ಯೂಎಸಿ ಸಂಚಾಲಕರಾದ ಶರತ್ ಕುಮಾರ್ ಸ್ವಾಗತಿಸಿದರು, ಮೇಘಾ ದೇವಳಿ ವಂದಿಸಿದರು ಮತ್ತು ನಂದಿತಾ ಭಾಗ್ವತ ಕಾರ್ಯಕ್ರಮ ನಿರ್ವಹಿಸಿದರು.
.
.
.