

ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಈ ರೀತಿಯ ಪದಪ್ರಯೋಗಗಳು ಮತ್ತು ಪ್ರದರ್ಶನಗಳು ವಿರುದ್ಧವಾಗಿವೆ ಎಂದು ಹೇಳಿರುವ ಅವರು, ಇದರಿಂದಾಗಿ ಸಾರ್ವಜನಿಕರಲ್ಲಿ ನಾಯಕರು ಮತ್ತು ಪಕ್ಷದ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಲು ಅವಕಾಶ ಮಾಡಿಕೊಡುವಂತಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪಕ್ಷದ ಕಾರ್ಯಕ್ರಮಗಳ ಪ್ರಚಾರಕ್ಕೆ ಸದ್ಭಾವನೆ ಮೂಡುವ ಪದಗಳನ್ನು ಬಳಸುವಂತೆ ಡಿಕೆ ಶಿವಕುಮಾರ್ ಕೋರಿದ್ದಾರೆ. 'ನಾಯಕರು', 'ಸಾಧಕರು', 'ಹಿರಿಯರು', 'ಹಿರಿಯ ನಾಯಕರು' ಇತ್ಯಾದಿ ಪದಗಳನ್ನು ಬಳಸುವುದು ಸೂಕ್ತ ಎಂದು ಅವರು ಸಲಹೆ ನೀಡಿದ್ದಾರೆ. ಈ ಮೂಲಕ ಪಕ್ಷ ಹಾಗೂ ನಾಯಕರ ಘನತೆ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ತಿಳಿಸಿದ್ದಾರೆ.
