Adv

news21 ‌ ‌YELLAPURNews prakatane --------- ‌ ‌patanakaroct10to17pydkumar Oct9to15 ‌ ‌ ‌ ‌ ‌ oct5to15-pyd ‌‌ ‌ Vishal-sep13to-unlimited ‌ ‌ ‌ ‌ IMG-20241009-195526

Sunday, 13 October 2024

'ಶಿಕ್ಷಣ ರತ್ನ' ರಾಜ್ಯ ಮಟ್ಟದ ಬಾಜನರಾದ ಬಿಸಗೋಡ ಹೈಸ್ಕೂಲ್ ಶಿಕ್ಷಕ ರವಿಕುಮಾರ್ ಕೆ ಎನ್

IMG-20241013-203229 ಯಲ್ಲಾಪುರ: ತಾಲೂಕಿನ ಬಿಸಗೋಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರವಿಕುಮಾರ ಕೆ.ಎನ್. ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅಪಾರ ಸೇವೆಯನ್ನು ಗುರುತಿಸಿ, ಬೆಂಗಳೂರಿನ 'ಸೂರ್ಯ ಫೌಂಡೇಶನ್' ಮತ್ತು 'ಸ್ಪಾರ್ಕ್ ಅಕಾಡೆಮಿ' ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ 'ಶಿಕ್ಷಣ ರತ್ನ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯು ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಳನ್ನು ಸಾರುತ್ತದೆ. IMG-20241013-203221 ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆರೆಸಂತೆ ಗ್ರಾಮದ ನಿವಾಸಿಯಾದ ರವಿಕುಮಾರ ಅವರು ಕಳೆದ 16 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಹಳ್ಳಿ ಶಾಲೆಗಳಲ್ಲಿಯೂ ಅವರು ಉತ್ತಮ ಶಿಕ್ಷಕರಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಯಲ್ಲಾಪುರದ ಬಿಸಗೋಡ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ (NMMS) ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಅವರ ಉಜ್ವಲ ಭವಿಷ್ಯಕ್ಕೆ ನಾಂದಿ ಹಾಡಿದ್ದಾರೆ. IMG-20241013-203212 ರವಿಕುಮಾರ ಅವರ ಶಿಕ್ಷಣ ತತ್ವವು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಮತ್ತು ಅರ್ಥಮಾಡಿಕೊಳ್ಳುವ ರೀತಿಯಲ್ಲಿ ಬೋಧಿಸುವುದನ್ನು ಆಧರಿಸಿದೆ. ವಿಶೇಷವಾಗಿ, ಮಕ್ಕಳಿಗೆ ಕಷ್ಟಕರವೆನಿಸುವ ಗಣಿತವನ್ನು ಕಬ್ಬಿನ ಗಾಣದ ಬೆಲ್ಲದಂತೆ ಸಿಹಿಯಾಗಿ ಬೋಧಿಸುವಲ್ಲಿ ಅವರ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳಿಗೆ ಅವರು ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದು, ಅವರಲ್ಲಿ ಅಪಾರ ಪ್ರೀತಿ ಮತ್ತು ಗೌರವವನ್ನು ಗಳಿಸಿದ್ದಾರೆ. IMG-20241013-203200 ಕೇವಲ ಶಿಕ್ಷಣದಲ್ಲೇ ಅವರ ಪ್ರತಿಭೆ ಸೀಮಿತವಾಗಿಲ್ಲ. ರವಿಕುಮಾರ ಅವರು ಉತ್ತಮ ಗಾಯಕರೂ ಆಗಿದ್ದು, ಎಲ್ಲಿಯೇ ಕವಿಗೋಷ್ಠಿ ನಡೆದರೂ ಅಲ್ಲಿ ಅವರ ಉಪಸ್ಥಿತಿ ಇರುತ್ತದೆ. ಅವರ ಬಹುಮುಖ ಪ್ರತಿಭೆಯು ಅವರನ್ನು ಮಕ್ಕಳಿಗೆ ಆದರ್ಶಪ್ರಾಯರನ್ನಾಗಿ ಮಾಡಿದೆ. ನಿಸ್ವಾರ್ಥ ಸೇವೆ ಮತ್ತು ವಿದ್ಯಾರ್ಥಿಗಳ ಬಗೆಗಿನ ಅಪಾರ ಪ್ರೀತಿಯಿಂದಾಗಿ ಅವರು ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಗುರುತಿನನ್ನು ಪಡೆದಿದ್ದಾರೆ. IMG-20241013-203145 ವಿದ್ಯಾರ್ಥಿಗಳು ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಅವರ ಕೊಡುಗೆಗಳನ್ನು ಗುರುತಿಸಿ, 2024-25ನೇ ಸಾಲಿನ 'ಶಿಕ್ಷಣ ರತ್ನ' ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭವು ಇಂಡೋ ಗ್ಲೋಬ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಹಯೋಗದೊಂದಿಗೆ ಬೆಂಗಳೂರಿನ ಹುರುಳಿಚಿಕ್ಕನಹಳ್ಳಿ, ಚಿಕ್ಕಬಾಣಾವರದಲ್ಲಿ ಅಕ್ಟೋಬರ್ 15 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ಪಾರ್ಕ್ ಅಕಾಡೆಮಿ ಮತ್ತು ಸೂರ್ಯ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಪಿ. ಸೋಮೇಶ್ ಅವರು ರವಿಕುಮಾರ ಅವರಿಗೆ ಪ್ರಶಸ್ತಿ ಪ್ರದಾನಿಸಲಿದ್ದಾರೆ ಎಂದು ತಿಳಿದು ಬಂದಿದೆ. IMG-20241013-203133 ರವಿಕುಮಾರ ಅವರ ಈ ಸಾಧನೆಯು ಯಲ್ಲಾಪುರ ತಾಲೂಕು ಮತ್ತು ಉತ್ತರ ಕನ್ನಡ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಅಪಾರ ಕೊಡುಗೆಯನ್ನು ಗುರುತಿಸಿ, ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರ ಈ ಸಾಧನೆಯು ಭವಿಷ್ಯದ ಶಿಕ್ಷಕರಿಗೆ ಪ್ರೇರಣೆಯಾಗಲಿ ಎಂದು ಆಶಿಸೋಣ.