ಯಲ್ಲಾಪುರ : ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆಯ ಶಿಕ್ಷಕಿಯಾದ ಸಂಗೀತಾ ಅವರ ನೇತೃತ್ವದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ಫಾದರ್ ರೊಯ್ಯಸ್ಟನ ಗೊನ್ಸಾಲ್ವಿಸ್ ರವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಮಾತನಾಡಿ, ಗಾಂಧೀಜಿಯವರ ಅಹಿಂಸಾತ್ಮಕ ಹೋರಾಟ ಮತ್ತು ಸತ್ಯದ ಮಾರ್ಗದ ಕುರಿತು ವಿವರಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ ಪಾತ್ರ ಮತ್ತು ಭಾರತೀಯ ಸಂಸ್ಕೃತಿ ಹಾಗೂ ಮೌಲ್ಯಗಳಿಗೆ ನೀಡಿದ ಕೊಡುಗೆಯನ್ನು ಅವರು ಪ್ರಶಂಸಿಸಿದ ಅವರು, ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸರಳತೆ, ನಿಷ್ಠೆ ಮತ್ತು ದೇಶಭಕ್ತಿಯನ್ನು ಉಲ್ಲೇಖಿಸಿ, ಅವರ ಜೀವನವನ್ನು ವಿದ್ಯಾರ್ಥಿಗಳು ಆದರ್ಶವಾಗಿಟ್ಟುಕೊಳ್ಳಬೇಕೆಂದು ಕರೆ ನೀಡಿದರು. ಶಾಸ್ತ್ರಿಯವರು ದೇಶಕ್ಕಾಗಿ ಮಾಡಿದ ಅಪಾರ ಕೊಡುಗೆಯನ್ನು ಸ್ಮರಿಸಿಕೊಂಡು, ಯುವಜನರು ದೇಶ ಮತ್ತು ಸಮಾಜದ ಸೇವೆಗೆ ಮುಂದಾಗಬೇಕೆಂದು ಅವರು ಹೇಳಿದರು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ ರಘುಪತಿ ರಾಘವ ರಾಜಾರಾಮ್ ಭಜನೆಯನ್ನು ಹಾಡಿದರು. ಮಕ್ಕಳು ಮತ್ತು ಶಿಕ್ಷಕರು ಒಬ್ಬರಿಗೊಬ್ಬರು ಹಸ್ತಲಾಘವ ಮಾಡಿದರು ಮತ್ತು ಸಿಹಿ ಹಂಚುವುದರ ಮೂಲಕ ಆಚರಣೆಯನ್ನು ಆಚರಿಸಲಾಯಿತು.