ಯಲ್ಲಾಪುರ : ನ್ಯಾಯಾಲಯದ ಸಭಾಂಗಣದಲ್ಲಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ ಜಯಂತಿ ವಿಜೃಂಭಣೆಯಿಂದ ಆಚರಿಸಲಾಯಿತು.
ಮಹಾನ್ ಚೇತನಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದ್ದ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಲಕ್ಷ್ಮೀಬಾಯಿ ಬಸನಗೌಡ ಪಾಟೀಲ್ ಮಾತನಾಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಸತ್ಯವೇ ದೇವರು ಎಂದು ಹೇಳಿ ಕೊಟ್ಟಿದ್ದಾರೆ. ಅವರು ಸತ್ಯಶೋಧನೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಗಾಂಧೀಜಿ ರವರ ಜೀವನ ತೆರೆದ ಪುಸ್ತಕದಂತೆ ಅವರ ಸಂದೇಶಗಳು ಸರ್ವಕಾಲಿಕ ಸತ್ಯ ಇಂದಿಗೂ ಪ್ರಸ್ತುತವಾಗಿದೆ. ನಾವೆಲ್ಲರೂ ಗಾಂಧೀಜಿ ಹಾಗೂ ಶಾಸ್ತ್ರೀಯ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅಪರ ಸರ್ಕಾರಿ ವಕೀಲರಾದ ಎನ್ ಟಿ ಗಾಂವ್ಕರ್ ಮುಖ್ಯ ಅತಿಥಿಯಾಗಿ ಮಾತನಾಡಿ, ಸತ್ಯಕ್ಕಾಗಿ ಹೋರಾಟದ ಪಾಠವನ್ನು ಕಲಿಸಿದವರು ಗಾಂಧೀಜಿ ಮತ್ತು ಶಾಸ್ತ್ರೀಯವರು, ಜೈ ಜವಾನ್ ಜೈ ಕಿಸಾನ್ ಘೋಷವಾಣಿ ಇಂದಿಗೂ ಪ್ರತಿಧ್ವನಿಸುತ್ತದೆ. ಸ್ಪೂರ್ತಿ ನೀಡುತ್ತದ ಇಡೀ ರಾಷ್ಟ್ರ ಈ ಮಹಾನ್ ವ್ಯಕ್ತಿಗಳಿಗೆ ಗೌರವ ನಮನ ಸಲ್ಲಿಸುತ್ತಿದೆ ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷರಾದ ಸರಸ್ವತಿ ಭಟ್ ಮಾತನಾಡಿ, ಪ್ರತಿಯೊಬ್ಬರು ಸ್ವಚ್ಛತೆಗೆ ಗಮನ ಹರಿಸಬೇಕು. ಯುವಕರು ದೇಶದ ಉತ್ತಮ ನಾಗರಿಕರಾಗಿ ಬದುಕಲು ಗಾಂಧೀಜಿ ಹಾಗೂ ಶಾಸ್ತ್ರಿಜಿ ಅವರ ಜೀವನ ಮೌಲ್ಯಗಳಿಂದ ಸಾಧ್ಯ, ಗಾಂಧೀಜಿ ಹಾಗೂ ಶಾಸ್ತ್ರೀಯ ಅವರ ಅಹಿಂಸಾತ್ಮಕ ಹೋರಾಟ ಭಾರತೀಯ ಸಂಸ್ಕೃತಿಗೆ ನೀಡಿದ ಮೌಲ್ಯಗಳಾಗಿವೆ. ಅವುಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದರು.
Pyara
ನಂತರ ಪ್ರತಿನಿತ್ಯವೂ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು, ಸ್ವಚ್ಛ ಪರಿಸರ ನಿರ್ವಹಣೆಯ ಕಾರ್ಯಕರ್ತರಾದ ಪೌರಕಾರ್ಮಿಕರಾದ ಗಣಪತಿ ಹಾಗೂ ಗಂಗವ್ವ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಚ್ಛತೆಯೇ ಸೇವೆ ತ್ಯಾಜ್ಯದಿಂದ ಕಲೆ ಪರಿಸರ ಜಾಗೃತಿಯ ಕುರಿತು ತ್ಯಾಜ್ಯ ವಸ್ತುಗಳನ್ನು ಉಪಯೋಗಿಸಿ ಕಲಾತ್ಮಕ ರಚನೆಗೆ ಬಹುಮಾನ ನೀಡಲಾಯಿತು. ವೈಟಿಎಸ್‌ಎಸ್ ಪಿಯು ಕಾಲೇಜಿನ ಭಾವನಾ ದೇಸಾಯಿ ಪ್ರಥಮ ಹಾಗೂ ಮಂಚಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಹಿಣಿ ವಿಶ್ವನಾಥ್ ಭಟ್ ದ್ವಿತೀಯ ಸ್ಥಾನ ಗಳಿಸಿದವರು. ಇವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ವೇದಿಕೆಯ ಮೇಲೆ ವಕೀಲರಾದ ಆರ್ ಕೆ ಭಾಗ್ವತ್ ಡಿ ಕೆ ಭಟ್, ಬಿಬಿ ಅಮೀನಾ ಉಪಸ್ಥಿತರಿದ್ದರು. ಕೊನೆಯಲ್ಲಿ ರಘುಪತಿ ರಾಘವ ರಾಜಾರಾಮ್ ಭಜನೆ ಹೇಳಿಕೊಡಲಾಯಿತು.