ಯಲ್ಲಾಪುರ: ಮಹಿಳೆಯರು ಕೃಷಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉದ್ಯಮಶೀಲರಾಗಬೇಕು ಎಂದು ಕುಂದರಗಿ ಗ್ರಾ.ಪಂ. ಸದಸ್ಯ ಗಣೇಶ ಹೆಗಡೆ ಅಭಿಪ್ರಾಯಪಟ್ಟರು.
ಮಾವಿನಕಟ್ಟಾದಲ್ಲಿ ಆಯೋಜಿಸಲಾಗಿದ್ದ ಕೃಷಿ ಉದ್ಯಮಶೀಲತಾ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಮಹಿಳೆಯರು ತಮ್ಮ ಜಮೀನಿನಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯುವ ಕುರಿತು ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಶಾಲಾ ಮಕ್ಕಳಿಗೂ ತರಕಾರಿ ಬೆಳೆಯುವ ಬಗ್ಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದರು.
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರವಿ ಪಟಗಾರ, ಕೃಷಿ ಪರಿವರ್ತನೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ರೈತರಿಗೆ ಸಹಕಾರ ನೀಡುವ ಮೂಲಕ ಉದ್ಯಮಶೀಲತೆಯನ್ನು ಯಶಸ್ವಿಗೊಳಿಸಬಹುದು ಎಂದರು.
ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿ ಸುಜಯ ಭಟ್ಟ, ಆಹಾರೋದ್ಯಮದಲ್ಲಿರುವ ಅವಕಾಶಗಳನ್ನು ಬಳಸಿಕೊಳ್ಳುವಂತೆ ಮತ್ತು ಸರಕಾರದಿಂದ ದೊರಕುವ ನೆರವು ಪಡೆದುಕೊಳ್ಳುವಂತೆ ಮಹಿಳೆಯರಿಗೆ ತಿಳಿಸಿದರು.
ಕಾರ್ಯಾಗಾರದಲ್ಲಿ ಗ್ರಾ.ಪಂ. ಅಧ್ಯಕ್ಷೆ ಯಮುನಾ ಸಿದ್ದಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯರು, ಸಾಮಾಜಿಕ ಕಾರ್ಯಕರ್ತರು ಮತ್ತು ಇತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾ.ಪಂ. ಅಧಿಕಾರಿಗಳು 'ಉದ್ಯೋಗಖಾತ್ರಿ ನಡಿಗೆ' ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
.