Adv

news21 ‌ ‌YELLAPURNews prakatane --------- ‌ ‌patanakaroct10to17pydkumar Oct9to15 ‌ ‌ ‌ ‌ ‌ oct5to15-pyd ‌‌ ‌ Vishal-sep13to-unlimited ‌ ‌ ‌ ‌ IMG-20241009-195526

Sunday, 13 October 2024

'ಗುರುಭೂಷಣ' ಪ್ರಶಸ್ತಿಗೆ ಆನಗೋಡ ಶಾಲೆಯ ಶಿಕ್ಷಕ ಮಾರುತಿ ಆಚಾರಿ ಆಯ್ಕೆ

IMG-20241013-195117 ಯಲ್ಲಾಪುರ : ತಾಲ್ಲೂಕಿನ ಆನಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಮಾರುತಿ ಆಚಾರಿ ಅವರು ರಾಜ್ಯ ಮಟ್ಟದ ಪ್ರತಿಭಾನ್ವಿತ ಹಾಗೂ ಕ್ರಿಯಾಶೀಲ ಶಿಕ್ಷಕರಿಗೆ ನೀಡಲಾಗುವ ಪ್ರತಿಷ್ಠಿತ 'ಗುರುಭೂಷಣ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಈ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಮಾರುತಿ ಆಚಾರಿ ಅವರು ಸಲ್ಲಿಸಿರುವ ಅಪಾರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. IMG-20241013-195109 ಕಳೆದ 17 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಾರುತಿ ಆಚಾರಿ ಅವರು, ಸಿದ್ದಾಪುರದಲ್ಲಿ ಆರು ವರ್ಷಗಳ ಕಾಲ ಸಿಆರ್‌ಪಿಯಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಶಿಕ್ಷಣ ಇಲಾಖೆ ಆಯೋಜಿಸುವ ಆಶುಭಾಷಣ, ಚಿತ್ರಕಲೆ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಪ್ರತಿನಿಧಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ತಮ್ಮ ಕಾರ್ಯಕ್ಷೇತ್ರದಲ್ಲಿನ ನವೀನತೆ ಮತ್ತು ಪ್ರಯೋಗಗಳಿಗೆ ಹೆಸರುವಾಸಿಯಾಗಿರುವ ಮಾರುತಿ ಆಚಾರಿ ಅವರು, ಆನಗೋಡ ಶಾಲೆಯಲ್ಲಿ ಖಗೋಲ ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಿ, ಟೆಲಿಸ್ಕೋಪ್ ಮೂಲಕ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ತಾರಾಮಂಡಲ ಬಗ್ಗೆ ಮಾಹಿತಿ ನೀಡಿ, ವೈಜ್ಞಾನಿಕ ವಿಷಯಗಳ ಮೇಲೆ ಆಸಕ್ತಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. IMG-20241013-195059 IMG-20241013-195048 ಇದಲ್ಲದೆ, ಅನಗೋಡ ಶಾಲೆಯ ವಿದ್ಯಾರ್ಥಿನಿ ಸಂಜನಾ ಅವರನ್ನು 'ರಾಷ್ಟ್ರಮಟ್ಟದ ಇನಸ್ಪೈರ್ ಮಾನಕ' ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆಗೆ ಕರೆದೊಯ್ದ ಸಂದರ್ಭದಲ್ಲಿ, ಶಿರಸಿ ಶೈಕ್ಷಣಿಕ ಜಿಲ್ಲೆಯ ಆರು ವಿದ್ಯಾರ್ಥಿಗಳ ತಂಡದ ನೇತೃತ್ವ ವಹಿಸಿ ದೆಹಲಿಗೆ ಕರೆದುಕೊಂಡು ಹೋಗಿ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಸ್ಪೂರ್ತಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. 
   ಅನಗೋಡ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾದ ಇ - ಕಲಿಕಾ ಕೊಠಡಿಯ ಮೂಲಕ ವಿದ್ಯಾರ್ಥಿಗಳಲ್ಲಿ ಕಂಪ್ಯೂಟರ್ ಜ್ಞಾನವನ್ನು ಪ್ರಸರಿಸಲು ಕಾರಣರಾಗಿದ್ದಾರೆ. ಗಣಿತ ವಿಷಯದಲ್ಲಿ ತಮ್ಮ ಅಪಾರ ಜ್ಞಾನ ಮತ್ತು ಪ್ರತಿಭೆಯನ್ನು ಪ್ರದರ್ಶಿಸಿ, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿ, ಜಿಲ್ಲಾ ಮಟ್ಟದ ಹಲವಾರು ಗಣಿತ ಶಿಕ್ಷಕರಿಗೆ ತರಬೇತಿ ನೀಡಿದ್ದಾರೆ. ರಾಜ್ಯಮಟ್ಟದ ಗಣಿತ ಅಭ್ಯಾಸ ಪುಸ್ತಕ ತಯಾರಿಕೆ ಕಾರ್ಯಗಾರದಲ್ಲಿ ಭಾಗವಹಿಸಿ, ತಮ್ಮ ಕೊಡುಗೆಯನ್ನು ನೀಡಿದ್ದಾರೆ. 
   ಮಾರುತಿ ಆಚಾರಿ ಅವರ ಈ ಎಲ್ಲ ಸಾಧನೆಗಳನ್ನು ಗುರುತಿಸಿ, ಅಕ್ಟೋಬರ್ 16 ರಂದು ಬೆಂಗಳೂರಿನ ಇಂಡೋಗ್ಲೋಬ್ ಪಿ.ಯು.ಕಾಲೇಜ್ ಆವರಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ, ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಅವರು 'ಗುರುಭೂಷಣ' ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಿದ್ದಾರೆ. ಈ ಪ್ರಶಸ್ತಿಯು ಮಾರುತಿ ಆಚಾರಿ ಅವರ ಶಿಕ್ಷಣ ಕ್ಷೇತ್ರದಲ್ಲಿನ ಕೊಡುಗೆಗಳನ್ನು ಪ್ರತಿಬಿಂಬಿಸುತ್ತದೆ ಮತ್ತು ಭವಿಷ್ಯದಲ್ಲಿ ಹೆಚ್ಚಿನ ಸಾಧನೆ ಮಾಡಲು ಪ್ರೇರಣೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. 
   ಮಾರುತಿ ಆಚಾರಿ ಅವರ ಈ ಸಾಧನೆಗೆ ಯಲ್ಲಾಪುರ ತಾಲ್ಲೂಕು ಹಾಗೂ ಆನಗೋಡ ಪ್ರದೇಶದ ಜನರು ಹರ್ಷ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಕೊಡುಗೆಯನ್ನು ಶ್ಲಾಘಿಸುತ್ತಾ, ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡಲು ಶುಭ ಹಾರೈಸುತ್ತಿದ್ದಾರೆ. ಈ ಸಾಧನೆ ಮುಂದಿನ ಪೀಳಿಗೆಯ ಶಿಕ್ಷಕರಿಗೆ ಸ್ಫೂರ್ತಿಯಾಗಲಿದೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸುಧಾರಣೆಗಳಿಗೆ ದಾರಿ ಮಾಡಿಕೊಡಲಿದೆ ಎನ್ನುವುದರಲ್ಲಿ ಸಂಶಯವಿಲ್ಲ.