ಯಲ್ಲಾಪುರ: ಜನವರಿ 22 ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಇಂದು, ಪಟ್ಟಣದ ಬಸವೇಶ್ವರ ಶ್ರೀರಾಮ ಭಕ್ತ ವೃಂದದ ವತಿಯಿಂದ ಆಯೋಜಿಸಲಾದ ರಾಮ ಮೂರ್ತಿಯ ಭವ್ಯ ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಮಾನ್ಯ ಶಾಸಕರಾದ ಶಿವರಾಂ ಹೆಬ್ಬಾರ್, ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ ಗ್ರಾಮದೇವಿ ದೇವಾಲಯದಲ್ಲಿ ಶ್ರೀರಾಮಚಂದ್ರ ಮೂರ್ತಿಗೆ ಪೂಜೆ ಸಲ್ಲಿಸಿ, ಭಕ್ತರೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದರು.
ಪಟ್ಟಣದ ಗ್ರಾಮದೇವಿ ದೇವಾಲಯದಿಂದ ಪ್ರಾರಂಭವಾದ ಮೆರವಣಿಗೆಯು ಅಂಬೇಡ್ಕರ್ ವೃತ್ತದ ಬಳಿ ಹೋಗಿ ಬಸವೇಶ್ವರ ವೃತ್ತದಲ್ಲಿ ಸಂಪನ್ನಗೊಂಡಿತು. ಇಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು ಮತ್ತು ಭಕ್ತರಿಗೆ ಪ್ರಸಾದವನ್ನು ವಿತರಿಸಲಾಯಿತು.