ಯಲ್ಲಾಪುರ: ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಿದ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಹಬ್ಬವನ್ನು ವಿವಿಧ ರಾಜ್ಯಗಳಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತದೆ.
ಸಂಕ್ರಾಂತಿ ಹಬ್ಬದ ನಿಮಿತ್ತ ಗ್ರಾಮದೇವಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು. ಜನರು ಹಿರಿಯರಿಗೆ ಮತ್ತು ಸ್ನೇಹಿತರಿಗೆ ಎಳ್ಳು-ಬೆಲ್ಲ ನೀಡಿ ಶುಭಾಶಯ ಕೋರಿದರು.
ಕರ್ನಾಟಕದಲ್ಲಿ ಸಂಕ್ರಾಂತಿಯನ್ನು ಸುಗ್ಗಿ ಹಬ್ಬವೆಂದು ಆಚರಿಸಲಾಗುತ್ತದೆ. ಮಹಿಳೆಯರು ಮತ್ತು ಮಕ್ಕಳು ಕಬ್ಬು, ಎಳ್ಳು, ಬೆಲ್ಲ ಮತ್ತು ತೆಂಗಿನಕಾಯಿಯಿಂದ ತಯಾರಿಸಿದ ಬಾಗಿನಗಳನ್ನು ಮನೆ ಮನೆಗೆ ತೆರಳಿ ವಿನಿಮಯ ಮಾಡಿಕೊಳ್ಳುತ್ತಾರೆ.
ಪಟ್ಟಣದ ವಿನಾಯಕ ಕಾಲೋನಿಯ ಮಕ್ಕಳು ಬಣ್ಣಬಣ್ಣದ ಉಡುಪು ಧರಿಸಿ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಮನೆ ಮನೆಗೆ ಸುತ್ತಾಡಿ ಎಳ್ಳು-ಬೆಲ್ಲ ಹಂಚಿಕೊಂಡರು.